ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2013-14 ರಿಂದ 2020-21 ನೇ ಶೈಕ್ಷಣಿಕ ಸಾಲಿನವರೆಗೆ ಪ್ರವೇಶಾತಿ ಪಡೆದು ವಿವಿಧ ಕೋರ್ಸುಗಳಲ್ಲಿ ಅನುತ್ತೀರ್ಣರಾಗಿರುವ ಮತ್ತು ಪರೀಕ್ಷೆ ತೆಗೆದುಕೊಂಡಿಲ್ಲದ ವಿದ್ಯಾರ್ಥಿಗಳಿಗೆ ಹಾಗೂ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದಿರುವ ಸ್ನಾತಕ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಸರ್ಟಿಫಿಕೇಟ್ ವಾರ್ಷಿಕ ಹಾಗೂ ಸೆಮಿಸ್ಟರ್ ಕೋರ್ಸ್ ತೆಗೆದುಕೊಂಡಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ವೆಬ್ಸೈಟ್ www.ksoumysuru.ac.in ನಲ್ಲಿ ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೇ ಆಗಸ್ಟ್ 20 ಹಾಗೂ 200 ರೂ. ದಂಡ ಶುಲ್ಕದೊಂದಿಗೆ ಸೆಪ್ಟಂಬರ್ 01 ಕೊನೆಯ ದಿನವಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದಿರುವ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಸಿ, ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸ್ ಮತ್ತು ಸ್ನಾತಕ್ಕೋತರ ಪದವಿಗಳಾದ ಎಂ.ಎ, ಎಂ.ಕಾA, ಎಂ.ಬಿ.ಎ, ಎಂಸ್ಸಿ, ಎಂ.ಲಿಬ್, ಐಎಸ್.ಸ್ಸಿ ಹಾಗೂ ಸ್ನಾತಕೋತ್ತರ ಡಿಪ್ಲೋಮಾ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8800335638 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ