ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ಸಮುದಾಯ ಬಾನುಲಿ ರೇಡಿಯೋ ಪಾಂಚಜನ್ಯ 90.8 ಎಫ್‌ಎಂ ನೇತೃತ್ವದಲ್ಲಿ ಹಾಗೂ ಇನ್ನರ್ ವೀಲ್ ಸಹಯೋಗದಲ್ಲಿ 8ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.
ಆಗಸ್ಟ್ 8ರಂದು ಬೆಳಗ್ಗೆ 10 ಗಂಟೆಗೆ ರೇಡಿಯೋ ಪಾಂಚಜನ್ಯದ ಸ್ಟುಡಿಯೋದಲ್ಲಿ ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ.
ರಸಪ್ರಶ್ನೆ ಸ್ಪರ್ಧೆಯು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಇರುತ್ತದೆ. ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳ 2 ತಂಡಕ್ಕೆ ಅವಕಾಶವಿರುತ್ತದೆ.
ನೋಂದಣಿ ಮತ್ತು ವಿವರಗಳಿಗೆ 8050809885 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.
ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಈ ಸ್ಪರ್ಧೆಯ ಬಹುಮಾನಗಳನ್ನು ಪ್ರಾಯೋಜಿಸಿದೆ.