15ರಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

Upayuktha
0 minute read
0



ಉಜಿರೆ: ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆ.15ರಂದು ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವ್ ರಾಷ್ಟ್ರೀಯ ಸಮಿತಿ ನವದೆಹಲಿ, ಇದರ ಸದಸ್ಯ ಹಾಗೂ ರಾಜ್ಯಸಭೆಯ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಧ್ವಜಾರೋಹಣಗೈದು ಅಮೃತಮಹೋತ್ಸವದ ಸಂದೇಶ ನೀಡಲಿದ್ದಾರೆ.


ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಕ್ಷೇತ್ರದ 75 ಹಿರಿಯರು ಬದ್ಧತೆ ಹಾಗೂ ಜವಾಬ್ದಾರಿಯ ಹಸ್ತಾಂತರದ ಸಂಕೇತವಾಗಿ ಕಿರಿಯರಿಗೆ ರಾಷ್ಟ್ರಧ್ವಜ ನೀಡುವ ಕಾರ್ಯಕ್ರಮ ನಡೆಯಲಿದೆ. ಎನ್.ಸಿ.ಸಿ. ವಿಭಾಗಗಳಿಂದ ಕವಾಯತು ಹಾಗೂ ದೇಶಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಜರಗಿಲಿವೆ. ಉಜಿರೆಯ ವ್ಯಾಪ್ತಿಯಲ್ಲಿನ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಈ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top