ಮಂಗಳೂರು: ರಾಜೀವ ಗಾಂಧಿ ವಿಶ್ವ ವಿದ್ಯಾಲಯದ ಅಡಿಯಲ್ಲಿ ಕಾರ‍್ಯ ನಿರ್ವಹಿಸುವ ಜೀವರಕ್ಷಾ ಟ್ರಸ್ಟ್ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಮತ್ತು ಪೌರರಕ್ಷಣಾ ಕಾರ್ಯಕರ್ತರಿಗೆ ಹೃದಯ ಸ್ತಂಭನ ಮರುಪೂರಣ ಪ್ರಾಯೋಗಿಕ ಕೌಶಲ್ಯ ತರಬೇತಿ ಶಿಬಿರ ದಿನಾಂಕ 19-08-2022ನೇ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ ಜೀವರಕ್ಷಾ ಟ್ರಸ್ಟ್ ಇದರ ಮಂಗಳೂರು ವಲಯದ ಉಸ್ತುವಾರಿ ಶ್ರೀ ಡಾ|| ಕಿಶನ್ ರಾವ್ ಬಾಳಿಲ ಅವರ ನೇತೃತ್ವದಲ್ಲಿ ತರಬೇತಿ ಜರುಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಶಿಬಿರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಫಾದರ್ ಮುಲ್ಲರ್ ಆಸ್ಪತ್ರೆಯ ಡಾ|| ಶೈಲಜಾ ಕಟ್ಟಿ ಮತ್ತು ಡಾ|| ನಮ್ರತಾ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪ್ರಕಟಣೆ ತಿಳಿಸಿದೆ.