ಪುತ್ತೂರು: 'ಚುಟುಕು ಸಾಹಿತ್ಯಕ್ಕೆ ಎಲ್ಲರನ್ನೂ ಆಕರ್ಷಿಸುವ ಗುಣ ಮತ್ತು ಸಾಮರ್ಥ್ಯವಿದೆ. ಚುಟುಕು ಸಾಹಿತ್ಯ, ಧ್ವನಿ ಪೂರ್ಣ, ಸತ್ವ ಭರಿತ ಸಾಹಿತ್ಯ ರಚನೆಗಳು ಜನಮಾನಸದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲುತ್ತವೆ' ಎಂದು ದಕ್ಷಿಣ ಕನ್ನಡ ಜಿಲ್ಲಾ ಚುಸಾಪ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರು ಅಭಿಪ್ರಾಯಪಟ್ಟರು.
ಅವರು ಪುತ್ತೂರಿನ ಡಾ ಸೂರ್ಯ- ರೋಟರಿ ಸಭಾಂಗಣದಲ್ಲಿ ಭಾನುವಾರ ಚುಟುಕು ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದರು. ಅವರು ಕಲ್ಪವೃಕ್ಷಕ್ಕೆ ನೀರೆರೆಯುವ ಮೂಲಕ ಘಟಕವನ್ನು ಉದ್ಘಾಟಿಸಿ ಮಾತನಾಡಿ, ನೂತನ ತಾಲೂಕು ಘಟಕಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಚುಸಾಪ ನೂತನ ಅದ್ಯಕ್ಷರಾದ ಸಮದ್ ಬಾವಾ ಪುತ್ತೂರು ಮತ್ತು ಪದಾಧಿಕಾರಿಗಳ ಪದಗ್ರಹಣನ್ನು ನೆರವೇರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ದಕ ಜಿಲ್ಲಾ ಚುಸಾಪ ಗೌರವಾಧ್ಯಕ್ಷರಾದ ಇರಾ ನೇಮು ಪುಜಾರಿ ವಹಿಸಿದ್ದರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಉಮೇಶ್ ನಾಯಕ್ ಮತ್ತು ರೋಟರಿ ಕ್ಲಬ್ ಅಧ್ಯಕ್ಷೆಯಾದ ಶ್ರೀಮತಿ ರಾಜೇಶ್ವರಿ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿ.ಜೆ ಕಜೆಮಾರ್ ಸ್ವಾಗತಿಸಿ, ಕಾರ್ಯದರ್ಶಿ ನಾರಾಯಣ ಕುಂಬ್ರ ವಂದಿಸಿದರು. ಖಾದರ್ ಕೆ.ಎಂ. ನಿರೂಪಿಸಿದರು. ಬಳಿಕ ಹಿರಿಯ ಕವಿಗಳಾದ ರಘುನಾಥ ರೈ ನುಳಿಯಾಲು ಅವರ ಅಧ್ಯಕ್ಷತೆಯಲ್ಲಿ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಸುಮಾರು 40 ಕವಿಗಳು ಪಾಲ್ಗೊಂಡು ತಮ್ಮ ಕವಿತೆಗಳನ್ನು ಪ್ರಸ್ತುತ ಪಡಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ