ಎಸ್.ಡಿ.ಎಂ ಪಿ.ಯು.ಸಿ : ಜಿಲ್ಲಾ ಮಟ್ಟದ ಅಂತರ್‌ ಕಾಲೇಜು ಭಾಷಣ ಸ್ಪರ್ಧೆ

Upayuktha
0

ಅವಕಾಶಗಳ ಸದ್ಬಳಕೆಯಿಂದ ಆತ್ಮಸ್ಥೈರ್ಯ ಹೆಚ್ಚಳ: ಹರೀಶ್ ಎಂ.ವೈ


ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಆತ್ಮಸ್ಥೆöÊರ್ಯ ಹೆಚ್ಚುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಎಂ.ವೈ ಹೇಳಿದರು.


ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷದ ಅಂಗವಾಗಿ ಉಜಿರೆಯ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಕೆನರಾ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಕನ್ನಡ ಮತ್ತು ಇಂಗ್ಲಿಷ್ ಭಾಷಣ ಸ್ಪರ್ಧೆಯನ್ನು ಅವರು ಬುಧವಾರ ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೊರಜಗತ್ತಿಗೆ ತೆರೆದುಕೊಳ್ಳುವ ಅವಕಾಶಗಳು ಕಡಿಮೆ ಇರುತ್ತವೆ. ಅವರಿಗೆ ಇಂತಹ ಕಾರ್ಯಕ್ರಮಗಳು ಒಳ್ಳೆಯ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.


ಭಾರತವನ್ನು ವಿಶ್ವಗುರುವಾಗಿಸಲು ಪ್ರಜೆಗಳು ನೀಡುತ್ತಿರುವ ಕೊಡುಗೆಗಳ ಜೊತೆಗೆ ದೇಶಪ್ರೇಮ ಹಾಗೂಸಂಸ್ಕೃತಿಯನ್ನು ಇಡೀ ಜಗತ್ತಿಗೆ ಸಾರುವತ್ತ ಯುವಜನತೆ ಇನ್ನಷ್ಟು ಒಲವು ತೋರಬೇಕು. ಇದಕ್ಕಾಗಿ ನಮ್ಮ ದೇಶದ ಪ್ರಜೆಗಳು ಸದೃಢ, ಸುಜ್ಞಾನಿ ಹಾಗೂ ವಿಜ್ಞಾನಿಗಳಾಗಿ ಪ್ರತಿಯೊಂದು ಕ್ಷೇತ್ರದಲ್ಲಿ ಉನ್ನತ ಶ್ರೇಣಿಯಿಂದ ಹೊರಹೊಮ್ಮಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ವಹಿಸಿ, ಸ್ಪರ್ಧೆಯ ರೂಪುರೇಷೆಗಳನ್ನು ವಿವರಿಸಿದರು. ಉಜಿರೆಯ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕಿ ರಾಜಶ್ರೀ ಬಿ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಉಪಸ್ಥಿತರಿದ್ದರು.


ಕಾಲೇಜಿನ ಉಪನ್ಯಾಸಕ ಸುನಿಲ್ ಪಂಡಿತ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಪಾರ್ಶ್ವನಾಥ್ ವಂದಿಸಿದರು. ಡಾ. ನಾಗಣ್ಣ ಡಿ.ಎ ಕಾರ್ಯಕ್ರಮವನ್ನು ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top