ಉಜಿರೆ: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಿಂದ ನೀಡಲ್ಪಡುವ "ಡಾ. ಯು.ಪಿ ಉಪಾಧ್ಯಾಯ ಮತ್ತು ಡಾ. ಸುಶೀಲ ಉಪಾಧ್ಯಾಯ ಸಂಶೋಧನಾ ಪ್ರಶಸ್ತಿ" ಗೆ ಧರ್ಮಸ್ಥಳದ ಸಂಶೋಧಕ, ಲೇಖಕ ಡಾ. ಎಸ್ .ಆರ್ ವಿಘ್ನರಾಜ್ ಆಯ್ಕೆಯಾಗಿದ್ದಾರೆ.
ಉಡುಪಿ ಎಂ.ಜಿ.ಎಂ. ಕಾಲೇಜು, ಉಜಿರೆ ಎಸ್ .ಡಿ.ಎಂ. ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದಲ್ಲಿ ಸಂಶೋಧಕರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ತುಮಕೂರು ವಿ.ವಿ.ಯಲ್ಲಿ ಸಂಶೋಧನಾ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸುತ್ತಿರುವ ಅವರಿಗೆ ಆ. 9ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ. ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.