ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಮಾನವಿಕ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಜ್ಯೂನಿಯರ್ ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಹಾಗೂ ಇಕೋ ಕ್ಲಬ್ ಇವರ ಸಹಭಾಗಿತ್ವದಲ್ಲಿ ಒಂದು ದಿನದ ಪ್ರಾಥಮಿಕ ಚಿಕಿತ್ಸಾ ತರಬೇತಿ ಕಾರ್ಯಾಗಾರ ನಡೆಯಿತು.
ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಪ್ರಾಥಮಿಕ ಚಿಕಿತ್ಸೆಯ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು.
ದ.ಕ ಜಿಲ್ಲಾ ರೆಡ್ ಕ್ರಾಸ್ ಇದರ ತರಬೇತುದಾರರಾದ ಡಾ. ರಾಮಚಂದ್ರ ಭಟ್ ಅವರು ಪ್ರಥಮ ಚಿಕಿತ್ಸೆಯ ತರಬೇತಿ ನೀಡಿದರು. ಭಾರತೀಯ ರೆಡ್ ಕ್ರಾಸ್ ಇದರ ದ ಕ ಜಿಲ್ಲಾ ಅಧ್ಯಕ್ಷರಾದ ಆಸ್ಕರ್ ಆನಂದ್ ಇವರು ಕಾರ್ಯಕ್ರಮ ಸಂಯೋಜನೆ ಮಾಡಿದ್ದರು.
ಕಾರ್ಯಾಗಾರದ ಸಂಯೋಜಕರಾದ ನಾಗರಾಜ್ ಭಂಡಾರಿ ಸ್ವಾಗತಿಸಿದರು. ಎಲ್ಲಾ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಶ್ರಮಾ ಪಿ.ಹೆಚ್ ಅಭ್ಯಾಗತರ ಪರಿಚಯ ಮಾಡಿದರು. ಪ್ರಣಮ್ಯಾ ಜೈನ್ ನಿರೂಪಿಸಿ ಫಯಾಜ್ ಅಹಮದ್ ಧನ್ಯವಾದ ಅರ್ಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ