ಕುಂಬಳೆ- ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಮಂಗಳವಾರ ಬೆಳಗ್ಗೆ ವೇದಮೂರ್ತಿ ಕೋಣಮ್ಮೆ ಮಹಾದೇವಭಟ್ಟರು ಗಣಪತಿ ಹವನವನ್ನು ನಡೆಸಿಕೊಟ್ಟರು.
ಈ ಶುಭಾವಸರದಲ್ಲಿ ಶಾಲಾ ಶಿಕ್ಷಕಿಯರು ಹಾಗೂ ಕುಂಬಳೆ ವಲಯದ ಮಾತೆಯರಿಂದ ಲಲಿತಾ ಸಹಸ್ರನಾಮ ಸಹಿತ ಕುಂಕುಮಾರ್ಚನೆ, ಹಾಗೂ ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ ನೆರವೇರಿತು.ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಎಸ್.ಎನ್.ರಾವ್ ಮುನ್ನಿಪ್ಪಾಡಿ, ಕಾರ್ಯದರ್ಶಿಗಳಾದ ಶ್ರೀಯುತ ಶ್ಯಾಮರಾಜ್ ದೊಡ್ಡಮಾಣಿ,ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಶ್ಯಾಂಭಟ್ ದರ್ಭೆಮಾರ್ಗ, ಸಹ ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ ಮತ್ತು ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ: ವಿಜಯಾ ಸುಬ್ರಹ್ಮಣ್ಯ, ಗ್ರಂಥಪಾಲಿಕೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ