
ಉಜಿರೆ: ಜಗತ್ತಿನ ಹಲವಾರು ರಾಷ್ಟ್ರಗಳಲ್ಲಿ ಆರ್ಥಿಕತೆ ಹಿಂಜರಿತವಾಗುತ್ತಿದೆ. ಆದರೆ ಭಾರತ ಮಾತ್ರ ಇದರಿಂದ ತನ್ನನ್ನು ತಾನು ರಕ್ಷಿಸಿಕೊಂಡಿದೆ ಎಂದು ಹಲವಾರು ವರದಿಗಳು ಹೇಳುತ್ತಿದೆ. ಭಾರತದ ಆರ್ಥಿಕ ವ್ಯವಸ್ಥೆಯು ಸದೃಢ ವಾಗುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಹಣಕಾಸು ಅಧಿಕಾರಿಯಾದ ಕೆ. ಎಸ್. ಜಯಪ್ಪ ನುಡಿದರು.
ಜು.28ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ಕೆ.ಎಸ್.ಎಸ್. ಕಾಲೇಜ್ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ನಡೆದ ‘ವಲ್ಡ್ ಎಕಾನಮಿ ಕ್ರೈಸಿಸ್ ಲರ್ನಿಂಗ್ ಆಂಡ್ ವೇ ಔಟ್‘ ಎಂಬ ರಾಜ್ಯ ಮಟ್ಟದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲರಾದ ಪಿ.ಎನ್. ಉದಯಚಂದ್ರ ಮಾತನಾಡಿ, ಭಾರತದ ಆರ್ಥಿಕತೆಯು ಕೇವಲ ಬಹುರಾಷ್ಟ್ರೀಯ ಕಂಪನಿಗಳಿಂದ ಮಾತ್ರವಲ್ಲ. ಚಿಕ್ಕ ಚಿಕ್ಕ ಸ್ಟಾರ್ಟ್ ಅಪ್ ಗಳಿಂದ ಬೆಳೆಯುತ್ತಿದೆ ಹಾಗೂ ಬ್ಯಾಂಕ್ ಗಳು ನೀಡುವ ಸಾಲದ ಮರುಪಾವತಿಯು ಈ ಆರ್ಥಿಕ ಹಿಂಜರಿತದಿಂದ ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮ ಹಲವು ಹಂತಗಳನ್ನು ಒಳಗೊಂಡಿದ್ದು ಮೊದಲನೇ ಭಾಗದಲ್ಲಿ ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕ ಹಾಗೂ ಸಣ್ಣಕತೆ ಬರಹಗಾರರಾದ ಪ್ರೇಮ್ ಶಂಕರ್ ನಿರ್ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಕಾಲೇಜಿನ ಉಪಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹಾಗೂ ಇತರ ಪ್ರಾಧ್ಯಾಪಕರು ಹಾಜರಿದ್ದರು. ಕಾರ್ಯಕ್ರಮವನ್ನು ಜಯಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಹಾಗೂ ಮಹೇಶ್ ಕುಮಾರ್ ಶೆಟ್ಟಿ ವಂದಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ