ತೆಂಕನಿಡಿಯೂರು ಕಾಲೇಜು: ರಾಷ್ಟ್ರಧ್ವಜ ಸಂಹಿತೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Upayuktha
0

ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ದಿನಾಂಕ 12/ 08 /2022 ರಂದು ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಅಂಗವಾಗಿ ರಾಷ್ಟ್ರಧ್ವಜ ಸಂಹಿತೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು ಭಾರತ ರಾಷ್ಟ್ರಧ್ವಜದ ಕುರಿತಾಗಿ ಭಾರತ ಸೇವಾದಳದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ತಿಮ್ಮಪ್ಪ ಶೆಟ್ಟಿ ಆರೂರು ಮಾಹಿತಿ ನೀಡಿದರು.


ಅವರು ಮಾತನಾಡಿ ರಾಷ್ಟ್ರಧ್ವಜದ ಉಗಮ ಹಾಗೂ ರಚನೆಯ ಹಿಂದಿನ ಘನಾವಳಿಗಳು ಸ್ವಾತಂತ್ರ್ಯ ಸಂಗ್ರಾಮದ ರೋಚಕತೆಗೆ ಉದಾಹರಣೆಯಾಗಿದೆ. ಈ ದೇಶದ ರಾಷ್ಟ್ರಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡು ಅದನ್ನು ಗೌರವಯುತವಾಗಿ ಬಳಸುವ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜು ಮಟ್ಟದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಸಂಚಾಲಕ ಶ್ರೀ ರಾಧಾಕೃಷ್ಣ, ಯೂತ್‌ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಉದಯ ಶೆಟ್ಟಿ ಕೆ., ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಕಾವ್ಯ ಎಂ. ಸ್ವಾಗತಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top