ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ.


ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್ಯ ಕೆ, ಪವಿತ್ರ ಭಟ್ ಕೆ, ವಾಣಿಜ್ಯ ವಿಭಾಗದ ಖುಷಿ ರೈ, ಸೌಮ್ಯ ರೈ, ನಿತ್ಯಶ್ರೀ ರೈ, ಸಿಂಚನಾ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನ್ನಪೂರ್ಣ ರೈ, ವಾಣಿಜ್ಯ ವಿಭಾಗದ ಹೇಮಲತಾ ಕೆ, ಮನ್ಯಾ ಶ್ರೀ ಎಂ, ಕಲಾ ವಿಭಾಗದ ಭೂಮಿಕಾ ಭಾಗವಹಿಸಿದ್ದರು.


ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top