ಸಚಿವ ವಿ. ಸೋಮಣ್ಣ ಧರ್ಮಸ್ಥಳ ಭೇಟಿ, ಡಾ. ಹೆಗ್ಗಡೆಯವರಿಗೆ ಗೌರವಾರ್ಪಣೆ

Chandrashekhara Kulamarva
0



ಉಜಿರೆ: ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ಆ 26 ರಂದು ರಾತ್ರಿ  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾದ, ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅಭಿನಂದಿಸಿ, ಗೌರವಿಸಿದರು. ಡಾ. ಹೆಗ್ಗಡೆಯವರು ಸಚಿವರೊಂದಿಗೆ ಮಾತುಕತೆ ನಡೆಸಿದರು.


ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಚಿವರನ್ನು ಶ್ರೀ ಕ್ಷೇತ್ರದಲ್ಲಿ ಸ್ವಾಗತಿಸಿ ಗೌರವಿಸಿದರು.  ಸಚಿವರು ಧರ್ಮಸ್ಥಳದಲ್ಲಿ ರಾತ್ರಿ ವಾಸ್ತವ್ಯವಿದ್ದು, ಆ 27ರಂದು ಬೆಳಿಗ್ಗೆ ಶ್ರೀ ಮಂಜುನಾಥಸ್ವಾಮಿ ದರ್ಶನ  ಪಡೆದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top