ಆಳ್ವಾಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿಗಳಿಗೆ 'ಕೆಸರಾಟ ಪಾಠ'

Upayuktha
0

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಕೆಸರಾಟ ಪಾಠ ಕಾರ್ಯಕ್ರಮವು ಕಾರ್ಕಳ ತಾಲೂಕಿನ ಪರಪ್ಪು ಗ್ರಾಮದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರಕಾರ ಗೇರು ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಮಣಿರಾಜ ಶೆಟ್ಟಿ, “ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣದ ಭರಾಟೆಯಲ್ಲಿ ಹಿಂದಿನ ಪರಂಪರಾಗತ ಹಾಗೂ ಸಾಂಪ್ರದಾಯಿಕ ಆಟಗಳು ಹಾಗೂ ಆಹಾರ ಪದ್ಧತಿಗಳನ್ನು ಮರೆತ್ತಿದ್ದೇವೆ. ವಿದ್ಯಾಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳನ್ನು ಪರಿಚಯಿಸುತ್ತಿರುವುದು ಶ್ಲಾಘನೀಯ” ಎಂದರು. ಬಳಿಕ, ಆಷಾಢ ಮಾಸದಲ್ಲಿ ತಯಾರಿಸುವ ಆಹಾರ ಪದ್ಧತಿಗಳ ಕುರಿತು ಮಾತನಾಡಿ, ಅವುಗಳ ಔಷಧೀಯ ಗುಣಗಳನ್ನು ವಿವರಿಸಿದರು.


ಆಳ್ವಾಸ್ ಪ.ಪೂ ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ಮಹಮ್ಮದ್ ಸದಾಕತ್, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕೆಸರಾಟ ಪಾಠ ಕಾರ್ಯಕ್ರಮದ ಔಚಿತ್ಯವನ್ನು ತಿಳಿಸಿದರು.


ಕಾರ‍್ಯಕ್ರಮದಲ್ಲಿ ಕಾರ್ಕಳದ ಪರಪ್ಪುವಿನ ಉದ್ಯಮಿ ರಾಜೇಶ್ ರಾವ್, ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಮಣಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಕುಕ್ಕುಂದೂರು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ ಅಂತೋನಿ ಡಿ’ಸೋಜಾ ಹಾಗೂ ಉದ್ಯಮಿ ಸುಭಾಷ್ ಕಾಮತ್ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಅನೇಕ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಈ ಸಂದರ್ಭ ಉಪನ್ಯಾಸಕರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್.ಡಿ, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕಿ ಶಾಲೆಟ್ ಮೋನಿಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಷ ಚಿಪ್ಳೂಣಕರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top