ಮಂಗಳೂರು: ಕೊಂಕಣಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ʼಕೊಂಕಣಿ ಮಾನ್ಯತಾ ದಿನಾಚರಣೆʼ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಎಸ್ ವಿ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಮೋಹನದಾಸ್ ಶೆಣೈ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಜಗದೀಶ್ ಪೈ ಅವರು ಮಾತನಾಡಿ, ಕೊಂಕಣಿ ಶ್ರೀಮಂತ ಪರಂಪರೆಯನ್ನು ಹೊಂದಿದ ಭಾಷೆ. ಅದನ್ನು ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದರು. ಇನ್ನೋರ್ವ ಅತಿಥಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್ ಕ್ಯಾಸ್ತೆಲಿನೋ, ಕೊಂಕಣಿ ಮಾನ್ಯತಾ ದಿನಾಚರಣೆಯ ಸಂದೇಶ ನೀಡಿದರು. ಇದೇ ವೇಳೆ ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಿದ ರಾಯ್ ಕ್ಯಾಸ್ತೆಲಿನೋ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಂಕಣಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯ ಪುಂಡಲೀಕ ಮರಾಠೆ, ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು. ಜನಪದ ಕಲಾವಿದ ಲಿಂಗಪ್ಪ ಗೌಡ ನೀರ್ಕೆರೆ ಹಾಗೂ ಕೊಂಕಣಿ ಸ್ನಾತಕೋತರ ವಿಭಾಗದ ಸಂಯೋಜಕ ಡಾ ದೇವದಾಸ್ ಪೈ ಉಪಸ್ಥಿತರಿದ್ದರು. ಎಸ್ ವಿ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷ ಗಣೇಶ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ಸಂಯೋಜಕ ಡಾ ಜಯವಂತ ನಾಯಕ್ ಪ್ರಸ್ತಾವನೆಗೈದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ ಉಷಾ ನಾಯಕ್ ಸ್ವಾಗತಿಸಿದರು. ರಾಧಿಕಾ ಪೈ ಹಾಗೂ ತಂಡ ಸುಂದರ ಕೊಂಕಣಿ ಗೀತೆ ಹಾಡಿದರು. ಎಸ್. ವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಸೀತಾರಾಮ ನಾಯಕ್ ವಂದಿಸಿದರು. ವಿದ್ಯಾರ್ಥಿನಿಯರಾದ ಶ್ರೀನಿಧಿ ನಾಯಕ್ ಹಾಗೂ ಸೌಜನ್ಯ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ