ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

Upayuktha
0

ಬದಿಯಡ್ಕ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿತು. ಬೆಳಗ್ಗೆ ಶಾಲೆಯ ಸಭಾಂಗಣದಲ್ಲಿ ಮುದ್ದುಕೃಷ್ಣ ವೇಷ ಪ್ರದರ್ಶನ, ಗೀತಾ ಪಠಣ, ವಿವಿಧ ಭೌದ್ಧಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎನ್. ರಾವ್ ಮನ್ನಿಪ್ಪಾಡಿ ಶ್ರೀಕೃಷ್ಣನ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಸಿದರು.


ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ಸಹ ಮುಖ್ಯೋಪಾಧ್ಯಾಯಿನಿ ಚಿತ್ರಾ ಸರಸ್ವತಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರಾಪ್ತಿಕ್ ಸ್ವಾಗತಿಸಿ, ವರುಣ್ ಸಿ.ಡಿ. ವಂದಿಸಿದರು. ಅಧ್ಯಾಪಕ, ಅಧ್ಯಾಪಿಕೆಯರು ಸಂಪೂರ್ಣ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Advt Slider:
To Top