ಅಶೋಕೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

Upayuktha
0

 



ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯದಲ್ಲಿ ಶುಕ್ರವಾರ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.


ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿವಿ ಗುರುಕುಲದ ಮಕ್ಕಳಿಗೆ ಬಾಳೆಗೊನೆ ಸ್ಪರ್ಧೆ, ಮೊಸರು ಗಡಿಗೆ ಒಡೆಯುವುದು, ರಸಪ್ರಶ್ನೆ, ರಾಧಾ ಕೃಷ್ಣ ವೇಷ, ಮೊಸರು ಕಡೆಯುವುದು, ಹಗ್ಗ ಜಗ್ಗಾಟ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.


ವಿಶೇಷ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಗುರುಕುಲದ ವಿದ್ಯಾರ್ಥಿಗಳಿಂದ ಕೋಲಾಟ, ಸುಧೀರ್ ಹೆಗಡೆಯವರಿಂದ ಬಾನ್ಸುರಿ ವಾದನ ನಡೆದವು. ರಾತ್ರಿ ಧಾರ್ಮಿಕ ವಿಧಿವಿಧಾನಗಳು, ಶ್ರೀಕೃಷ್ಣನ ತೊಟ್ಟಿಲೋತ್ಸವ ಮತ್ತಿತರ ಕಾರ್ಯಕ್ರಮಗಳು ನಡೆದವು.


ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವ್ಯವಸ್ಥಾ ಪರಿಷತ್ ಅಧ್ಯಕ್ಷ ಡಿ.ಡಿ.ಶರ್ಮಾ, ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಪ್ರಾಚಾರ್ಯ ಮಹೇಶ್ ಹೆಗಡೆ, ಉಪ ಪ್ರಾಚಾರ್ಯರಾದ ಸೌಭಾಗ್ಯ, ವಿಶ್ವೇಶ್ವರ ಮತ್ತಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top