ತೆಂಕನಿಡಿಯೂರು: ಆಗಸ್ಟ್ 12, ಡಾ. ಎಸ್.ಆರ್. ರಂಗನಾಥನ್ ಜನ್ಮದಿನಚಾರಣೆಯ ಅಂಗವಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗು ಗ್ರಂಥಪಾಲಕ ಗಣಪತಿ ಭಟ್ ಇಂದಿನ ತಂತ್ರಜ್ಞಾನಯುಗದಲ್ಲೂ ಕೂಡಾ ಉನ್ನತ ಶಿಕ್ಷಣದಲ್ಲಿ ಗ್ರಂಥಾಲಯ ಮಹತ್ವಪೂರ್ಣ ಮತ್ತು ಹೊಸ ಆಯಾಮವನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ ಎನ್ನುತ್ತಾ ಭಾರತದ ಗೃಂಥಾಲಯಗಳ ಆಧುನೀಕರಣ ಮತು ಬೆಳವಣಿಗೆಗೆ ಮಹತ್ವಪೂರ್ಣ ಕೊಡುಗೆ ಸಲಿಸಿದ್ದ ಡಾ. ಎಸ್.ಆರ್. ರಂಗನಾಥನ್ ರವರ ಜೀವನ ಮತ್ತು ಕೊಡುಗೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದ್ದ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ವಿದ್ಯಾರ್ಥಿಗಳ ತಗರತಿ ಹೊರತುಪಡಿಸಿ ಉಳಿದ ಸಮಯವನ್ನು ಗ್ರಂಥಾಲಯದಲ್ಲಿ ಕಳೆದಲ್ಲಿ ಖಂಡಿತಾ ಭವಿಷ್ಯ ಉಜ್ವಲವಾಗುವುದು ಎಂದರು.
ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಾಧಾಕೃಷ್ಣ, ಕಾರ್ಯಕ್ರಮ ಆಯೋಜಿಸಿದ ಕಾಲೇಜಿನ ಗ್ರಂಥಪಾಲಕ ಕೃಷ್ಣ ಸಾಸ್ತಾನ ಹಾಗೂ ಗ್ರಂಥಾಲಯ ಸಹಾಯಕಿಯರಾದ ಶ್ರೀಮತಿ ಸುನೀತಾ ಮತ್ತು ಶ್ರೀಮತಿ ಪ್ರಮೀಳಾ ಉಪಸ್ಥಿತರಿದ್ದರು. ರಾಜಕೀಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ಎನ್. ಸ್ವಾಗತಿಸಿದರೆ, ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕ ಶ್ರೀ ಅಶೋಕ್ ವಂದಿಸಿದರು. ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಕು. ಮನೀಷಾ ಕಾರ್ಯಕ್ರಮ ನಿರೂಪಿಸಿದರು. ನಂತರದಲ್ಲಿ ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕೃತಿಗಳ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ. ಬೋಧಕ/ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ವೀಕ್ಷಿಸಿದರು.