ಸಂಸ್ಥೆಯ ಕಚೇರಿ ಉದ್ಘಾಟಿಸಿದ ಶಾಸಕ ಉಮಾನಾಥ ಕೋಟ್ಯಾನ್
ಮೂಡುಬಿದಿರೆ: ಭಾರತ್ ಸ್ಕೌಟ್ಸ್-ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ಸಂಸ್ಥೆಯ ನೂತನ ಕಚೇರಿಯನ್ನು ಉದ್ಘಾಟಿಸಿಸಲಾಯಿತು.
ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಡಿಸೆಂಬರ್‍ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಸಾಂಸೃತಿಕ ಜಾಂಬೂರಿಯು ಕೇವಲ ಒಂದು ಸಂಸ್ಥೆಯ ಕೆಲಸವಾಗದೆ ಸರಕಾರದ ಕಾರ್ಯವೆಂದು ಪರಿಗಣಿಸಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವುದಾಗಿ ಹೇಳಿದರು. ಸ್ಕೌಟ್ಸ್-ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಆಯುಕ್ತ ಡಾ. ಎಂ. ಮೋಹನ್ ಆಳ್ವರ ಕಾರ್ಯ ವೈಖರಿಯನ್ನು ಶ್ಲಾಘಿಸಿದ ಅವರು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮೂಡುಬಿದಿರೆ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ ಎಂದರು.
ಸ್ಕೌಟ್ಸ್-ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂದಿಯಾ ಮಾತನಾಡಿ, ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಮಾದರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ವ್ಯಕ್ತಿತ್ವ ವಿಕಸನ ಹಾಗೂ ಶಿಕ್ಷಣದಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ. ಇಲ್ಲಿನ ವಿದ್ಯಾರ್ಥಿಗಳು ಸ್ಕೌಟ್ಸ್-ಗೈಡ್ಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತಿಭಾವಂತರಾಗುವುದರೊಂದಿಗೆ ಸತ್ಪ್ರಜೆಗಳಾಗಿ ಬೆಳೆಯುತ್ತಿದ್ದಾರೆ. ಶಿಕ್ಷಣ ಒತ್ತಡವಾಗದೆ ಸಂತೋಷದಿಂದ ಕಲಿಯುವ ಕ್ರಿಯೆಯಾಗಬೇಕುವ ಎನ್ನುವ ದೃಷ್ಟಿಯಿಂದ ಸ್ಕೌಟ್ಸ್-ಗೈಡ್ಸ್ ಕೆಲಸ ಮಾಡುತ್ತದೆ. ಅಂತರಾಷ್ಟ್ರೀಯ ಮಟ್ಟದ ಸಾಂಸ್ಕøತಿಕ ಜಾಂಬೂರಿಯು ಮಕ್ಕಳ ಬೌದ್ಧಿಕ ಮತ್ತು ಸಾಂಸ್ಕøತಿಕ ಬೆಳವಣಿಗೆಯೊಂದಿಗೆ ಸುಂದರ ನೆನಪುಗಳನ್ನು ಕಟ್ಟಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ, ಸ್ಕೌಟ್ಸ್-ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಪ್ರತಿಯೊಬ್ಬರು ತಾವು ಮಾಡುವ ಕೆಲಸಗಳಿಗೆ ಬದ್ಧರಾಗಿರಬೇಕು. ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಯೋಜನೆಯ ಹಿಂದೆ ವಿಶ್ವಮಟ್ಟದ ಆಲೋಚನೆಗಳಿರಬೇಕು. ಸ್ಕೌಟ್ಸ್-ಗೈಡ್ಸ್ ಸಾಂಸ್ಕøತಿಕ ಜಾಂಬೂರಿಗೆ ಅಂದಾಜು 30 ಕೋಟಿಯಷ್ಟು ಖರ್ಚುವೆಚ್ಚಗಳು ತಗುಲಲಿದ್ದು, ಇದರ ಸಂಪೂರ್ಣ ವ್ಯವಸ್ಥೆಗೆ ಪ್ರತಿಯೊಬ್ಬರು ಸಂಘಟಿತ ಮನೊಭಾವದಿಂದ ಒಟ್ಟಾಗಬೇಕು ಎಂದರು.
ಈ ಸಂದರ್ಭ ಡಿಸೆಂಬರ್‍ನಲ್ಲಿ ನಡೆಯಲಿರುವ ಸ್ಕೌಟ್ಸ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ಲೋಗೊ ಅನಾವರಣ ಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಏಷ್ಯಾ ಫೆಸಿಫಿಕ್ ರೀಜನ್‍ನ ನಿರ್ದೇಶಕ ಪ್ರಸನ್ನ ಶ್ರೀವತ್ಸವ, ಸ್ಕೌಟ್ಸ್-ಗೈಡ್ಸ್ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ಕೃಷ್ಣಸ್ವಾಮಿ ಆರ್, ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ, ಅಡೀಶನಲ್ ಇಂಟರ್‌ನ್ಯಾಷನಲ್ ಕಮಿಷನರ್ ಮಧುಸೂದನ್, ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ, ಉದ್ಯಮಿ ಗಫೂರ್, ಮಹೇಂದ್ರ ವರ್ಮ ಇನ್ನಿತರರು ಉಪಸ್ಥಿತರಿದ್ದರು. ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್ ವಂದಿಸಿದರು, ಸ್ಥಳೀಯ ಸಂಸ್ಥೆ ಸಹಕಾರ್ಯದರ್ಶಿ ನವೀನ್‍ಚಂದ್ರ ಅಂಬೂರಿ ನಿರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ