|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ವಿವಿ: ಆಗಸ್ಟ್ 10 ರಿಂದ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಮಂಗಳೂರು ವಿವಿ: ಆಗಸ್ಟ್ 10 ರಿಂದ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯವು 2022-23 ನೇ ಸಾಲಿನ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ ಈ ಆಗಸ್ಟ್ ತಿಂಗಳ 10 ರಿಂದ 25 ರವರೆಗೆ ಏರ್ಪಡಿಸುತ್ತಿದೆ. 


ಸಾಹಿತ್ಯ, ಲಲಿತ ಕಲೆ, ಸಂಗೀತ, ನೃತ್ಯ ಮತ್ತು ರಂಗಭೂಮಿ ಹೀಗೆ ಐದು ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಕ್ರಮವಾಗಿ ಶ್ರೀ ಕಾಳವಾರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ; ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ; ಗೋವಿಂದದಾಸ ಕಾಲೇಜು, ಸುರತ್ಕಲ್; ಶ್ರೀ ರಾಮಕೃಷ್ಣ ಕಾಲೇಜು, ಮಂಗಳೂರು; ಆಳ್ವಾಸ್ ಕಾಲೇಜು, ಮೂಡಬಿದಿರೆ, ಈ ಐದು ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.  


ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಟ್ಟ ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅವರಿಗೆ ಈ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಡಬೇಕೆಂದು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರನ್ನು ವಿಶ್ವವಿದ್ಯಾನಿಲಯದ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಕಿಶೋರಿ ನಾಯಕ್ ಕೆ ಅವರು ಮನವಿ ಮಾಡಿಕೊಂಡಿದ್ದಾರೆ. 


ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ವಿದ್ಯಾರ್ಥಿಗಳು ಎಐಯು ವತಿಯಿಂದ ಸಂಘಟಿಸಲ್ಪಡುವ ಮುಂದಿನ ದಕ್ಷಿಣ ವಲಯ ಯುವಜನೋತ್ಸವ ಮತ್ತು ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ, ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post