ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ ಆಗಮಿಸಲಿದ್ದು, ಅವರ ಸ್ವಾಗತಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಅಧಿಕಾರಿಗಳ ಜತೆ ಪೂರ್ವಸಿದ್ಧತಾ ಸಭೆ ನಡೆದಿದೆ.
1200 ಕೋಟಿ ರೂ ಕಾಮಗಾರಿ ಲೋಕಾರ್ಪಣೆ:
ಮಂಗಳೂರಿಗೆ ಬರಲಿರುವ ಪ್ರಧಾನಿ ಮೋದಿ ಅವರು ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್‌ಎಂಪಿಎ) ಸುಮಾರು 1,200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುವ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ.
ಬೆಳಗ್ಗೆ ಕೊಚ್ಚಿನ್ ಬಂದರು ಕಾರ್ಯಕ್ರಮ ಮುಗಿಸಿದ ಬಳಿಕ ಮಂಗಳೂರಿಗೆ ಆಗಮಿಸಲಿದ್ದು, ಎನ್‌ಎಂಪಿಎಗೆ ಭೇಟಿ ನೀಡಿ ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಅನಂತರ ಸಂಜೆ 5 ಗಂಟೆಗೆ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಇನ್ನೆರಡು ದಿನಗಳಲ್ಲಿ ಕಾರ್ಯಕ್ರಮದ ರೂಪುರೇಷೆ ಅಂತಿಮಗೊಳ್ಳಲಿದೆ ಎಂದು ಸಂಸದ,, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಪ್ರಧಾನಿ ಪ್ರವಾಸದ ವೇಳೆ ನವಮಂಗಳೂರಿನಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಅನಘಾ ರಿಫೈನರಿ ಬರ್ತ್ ನಂ.14 ಸೇರಿದಂತೆ ಆರು ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಅದೇ ರೀತಿ ಸಾಗರಮಾಲಾ ಯೋಜನೆಯ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ