ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ, ಪ್ರತಿ ಮನೆಗೆ ರಾಷ್ಟ್ರಧ್ವಜ ಅಳವಡಿಸಲು ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ರಾಷ್ಟ್ರಧ್ವಜಗಳನ್ನು ವಿತರಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಮಾರ್ಗದರ್ಶನ ಮಾಡಿದರು.
ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ರಾಜೇಶ್ ಕಲ್ಲಬೆಟ್ಟು, ಜೀವಶಾಸ್ತ್ರ ಉಪನ್ಯಾಸಕ ಸುನಿಲ್ ಪಿ.ಜೆ, ಗ್ರಂಥಪಾಲಕ ಮನೋಹರ್ ಹಾಗೂ ಹಿಂದಿ ಭಾಷಾ ಉಪನ್ಯಾಸಕಿ ಡಾ. ಫ್ಲೇವಿಯಾ ಪೌಲ್ ಹಾಗೂ ಎನ್. ಎಸ್. ಎಸ್ ನಾಯಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ