ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Upayuktha
0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಆಶ್ರಯದಲ್ಲಿ ಸಂಸ್ಕೃತ ದಿನದ ಅಂಗವಾಗಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು.


ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ ಹರೀಶ ಕುಮಾರ ಎಂ . ಹಾಗೂ ಬೆಳ್ತಂಗಡಿ ತಾಲೂಕು ಸಂಸ್ಕೃತ ಭಾರತೀ ಇದರ ಸಂಯೋಜಕಿ ಆಭಿಜ್ಞಾ ಉಪಾಧ್ಯಾಯ ಇವರು ಅಭ್ಯಾಗತರಾಗಿ ಆಗಮಿಸಿ ಸಂಸ್ಕೃತದ ಮಹತ್ವ ತಿಳಿಸಿದರು. 


ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ವಿದ್ಯಾರಣ್ಯ ಶರ್ಮಾ ಪರಿಚಯಿಸಿ ಸ್ವಾಗತಿಸಿದರು. ಧಾರಿಣಿ ನಿರೂಪಿಸಿ, ಸಂಸ್ಕೃತ ಸಂಘದ ಅಧ್ಯಕ್ಷೆ ಧರಿತ್ರಿ ಭಿಡೆ ಧನ್ಯವಾದ ಅರ್ಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top