ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಆಗಸ್ಟ್ 19 ರಂದು ವಿಜ್ಞಾನ ಮಾದರಿಗಳ ಸ್ಪರ್ಧೆ ಮತ್ತು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಡಾ. ಎ.ಪಿ.ಜೆ ಅಬ್ದುಲ್ ಕಲಾಂರವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸುದಾನ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ನಾಗರಾಜ್ ರವರು “ಮಕ್ಕಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವ ಮೂಲಕ ವಿಜ್ಞಾನ ಮತ್ತು ವಿಜ್ಞಾನದ ಆವಿಷ್ಕಾರಗಳು, ಸದುಪಯೋಗವಾಗುವಂತೆ ಮಾಡಬೇಕು” ಎಂದು ಕರೆ ನೀಡಿದರು.
9ನೇ ತರಗತಿಯ ವಿದ್ಯಾರ್ಥಿನಿ ಕು| ಸಾನ್ವಿ ಡಾ| ಎ.ಪಿ.ಜೆ ಅಬ್ದುಲ್ ಕಲಾಂರವರ ಸಾಧನೆ, ಜೀವನದೃಷ್ಟಿಯ ಬಗ್ಗೆ ವಿವರಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡ ಈ ಸ್ಪರ್ಧೆಯನ್ನು ಸುದಾನ ಶಾಲೆಯ ‘ಅವನಿ’ ವಿಜ್ಞಾನ ಸಂಘವು ಆಯೋಜಿಸಿತ್ತು. ತೀರ್ಪುಗಾರರಾಗಿ ವಿಜ್ಞಾನ ಶಿಕ್ಷಕಿಯರಾದ ಪ್ರತಿಮಾ, ಪೂಜಾ, ನಿವೇದಿತಾ, ಮತ್ತು ನಿರ್ಮಲಾ ಭಾಗವಹಿಸಿದ್ದರು.
ವಿಜ್ಞಾನ ಸಂಘದ ವಿದ್ಯಾರ್ಥಿ ಪ್ರತಿನಿಧಿ ಅಚಲ್ ಕೆ (10) ಕಾರ್ಯಕ್ರಮವನ್ನು ನಿರ್ವಹಿಸಿದರು. ಪ್ರೌಢ ಶಾಲಾ ಮತ್ತು ವಿಜ್ಞಾನ ಸಂಘದ ಸಂಯೋಜಕಿ ಪ್ರತಿಮಾ ಎನ್ ಜಿ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕರಾದ ರೇಖಾಮಣಿ ಮತ್ತು ಶಾರದಾ ಸಹಕರಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ