ವಿವಿ ಕಾಲೇಜು: 80 ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ

Upayuktha
0

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್ಎಸ್ಎಸ್, ವಿದ್ಯಾರ್ಥಿ ಸಂಘ, ಭಾರತೀಯ ರೆಡ್ ಕ್ರಾಸ್ ಮಂಗಳೂರು, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ, ಲೇಡಿಗೋಷನ್ ಆಸ್ಪತ್ರೆಗಳ ಸಹಯೋಗದೊಂದಿಗೆ ರವೀಂದ್ರ ಕಲಾಭವನದಲ್ಲಿ ಇತ್ತೀಚೆಗೆ  ರಕ್ತದಾನ ಶಿಬಿರ ನಡೆಯಿತು. 


ಶಿಬಿರ ಉದ್ಘಾಟಿಸಿದ ರೆಡ್ ಕ್ರಾಸ್ ಬ್ಲಡ್ ಬ್ಯಾಂಕಿನ ಆರೋಗ್ಯಾಧಿಕಾರಿ ಡಾ. ಜೆ ಎನ್ ಭಟ್, ರಕ್ತದಾನ ಸಮಾಜಕ್ಕೆ ಸಹಾಯ ಮಾಡುವ ಅತ್ಯಂತ ಸರಳ ವಿಧಾನ. ರಕ್ತದಾನದಿಂದ ಏನನ್ನೂ ಕಳೆದುಕೊಳ್ಳದೆ, ಅಮೂಲ್ಯ ಜೀವಗಳನ್ನು ಉಳಿಸುವ ಅವಕಾಶ ನಮ್ಮ ಕೈಯಲ್ಲಿದೆ, ಎಂದರು. ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಶೈಕ್ಷಣಿಕ ಕಾರ್ಯಚಟುವಟಿಕೆಗಳ ಒತ್ತಡದ ನಡುವೆಯೂ ರಕ್ತದಾನ ಶಿಬಿರ ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. 


ಮಂಗಳೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಉಪನ್ಯಾಸಕರೂ ಸೇರಿದಂತೆ 80 ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ರಕ್ತದಾನ ಮಾಡಿದರು. 

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top