ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ: ನಿಷೇಧಾಜ್ಷೆ ಜಾರಿ

Upayuktha
0



ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಆಗಸ್ಟ್ 12 ರಿಂದ 25 ರ ವರೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಎಂ.ಜಿ.ಎಂ ಪದವಿ ಪೂರ್ವ ಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರದ ಭಂಡಾರಕರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.


ಪರೀಕ್ಷೆಗಳು ಮುಕ್ತಾಯವಾಗುವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top