ತೆಂಕನಿಡಿಯೂರು ಕಾಲೇಜು: ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

Upayuktha
0

ಉಡುಪಿ: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲೇಜು ಮಟ್ಟದ ಕಾರ್ಯಕ್ರಮ “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆ “ಸಪ್ತಾಹ”ವನ್ನು ಆ.1ರಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತೀಯ ಸೇನೆಯ ನಿವೃತ್ತ ಜೂನಿಯರ್ ಕಮೀಷನರ್ ಆಫೀಸರ್ ಗಿಲ್ಬರ್ಟ್ ಬ್ರಗ್ರಾನ್ಸ ನೆರವೇರಿಸಿದರು.


ಅನಂತರ ಮಾತನಾಡಿದ ಅವರು, ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡುತ್ತಾ, ನಮ್ಮ ದೇಶದ ಯುವಕರಿಗೆ ದೇಶ ಸೇವೆ ಮಾಡಲು ಇದೊಂದು ಅಪೂರ್ವ ಅವಕಾಶ. 4 ವರ್ಷಗಳ ಸೈನ್ಯ ಸೇವೆಯ ನಂತರ ಇಷ್ಟಪಟ್ಟರೆ ಅಗ್ನಿವೀರರು ನಿಗದಿ ಪರೀಕ್ಷೆ ಉತ್ತೀರ್ಣರಾಗಿ ಖಾಯಂ ಸೈನಿಕರಾಗಿ ಸೇನೆಯಲ್ಲಿ ಸೇವೆಸಲ್ಲಿಸಬಹುದು. ಒಂದು ವೇಳೆ ಅಗ್ನಿ ವೀರರು ಸೇವೆಯನ್ನು ಬಿಟ್ಟರೆ ಬೇರೆ ಯಾವುದೇ ಸರಕಾರಿ ಅಥವಾ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವರಿಗೆ ಉದ್ಯೋಗ ನೀಡುವ ವೇಳೆ ಶೇಕಡಾ 10 ಮೀಸಲಾತಿ ಇರುತ್ತದೆ ಎಂದು ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಯವರು ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ದೇಶ ಪ್ರೇಮ ಉದ್ದೀಪನಗೊಳಿಸುವ ಕೆಲಸದಲ್ಲಿ ನಿರತರಾಗಬೇಕು. ನಮಗೆ ದೇಶ ಮುಖ್ಯ, ದೇಶವಿದ್ದರೆ ನಾವೆಲ್ಲ ಉತ್ತಮ ಭವಿಷ್ಯವನ್ನು ಹೊಂದಬಹುದು ಎಂದು ನುಡಿದರು. ಕಾಲೇಜು ಮಟ್ಟದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಸಂಚಾಲಕ ಶ್ರೀ ರಾಧಾಕೃಷ್ಣ ಸ್ವಾಗತಿಸಿ, ಪ್ರಸ್ತಾವನೆ ಗೈದರು. ದ್ವಿತೀಯ ಎಂ.ಎಸ್.ಡಬ್ಲ್ಯೂ ಅನುಷಾ ಪ್ರಾರ್ಥಿಸಿದರು. ಮನಿಷಾ ನಿರೂಪಿಸಿದರು. ಧೀರಜ್ ವಂದಿಸಿದರು. ಈ ಸಪ್ತಾಹ ಕಾರ್ಯಕ್ರಮ ಆಗಸ್ಟ್ 8ನೇ ತಾರೀಖಿನವರೆಗೆ ಮುಂದುವರಿಯಲಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top