ತೆಂಕನಿಡಿಯೂರು ಕಾಲೇಜು: ಬಿ.ಕಾಂ. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Chandrashekhara Kulamarva
0

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಇತ್ತೀಚೆಗೆ ಬಿ.ಕಾಂ. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.


ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ತಿಮ್ಮಣ್ಣ ಜಿ. ಭಟ್, ವಾಣಿಜ್ಯಶಾಸ್ತ್ರ ವಿಭಾಗದ ಡಾ. ಉದಯ ಶೆಟ್ಟಿ ಕೆ. ವಿದ್ಯಾರ್ಥಿಗಳಿಗೆ ವಾಣಿಜ್ಯಶಾಸ್ತ್ರ ವಿಷಯದ ಅಧ್ಯಯನದಿಂದಾಗುವ ಪ್ರಯೋಜನಗಳನ್ನು ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಬಗ್ಗೆ ಡಾ. ಮಹೇಶ್ ಕುಮಾರ್ ಕೆ.ಇ., ಉದ್ಯೋಗ ಮಾರ್ಗದರ್ಶನ ವೇದಿಕೆಯ ಬಗ್ಗೆ ಉಮೇಶ್ ಪೈ ಮಾಹಿತಿ ನೀಡಿದರು.


ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ರಾಧಾಕೃಷ್ಣ ಉಪಸ್ಥಿತರಿದ್ದರು. ಡಾ. ವೆಂಕಟೇಶ ಹೆಚ್.ಕೆ. ಸ್ವಾಗತಿಸಿದರು, ಶ್ರೀಮತಿ ಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top