
ಉಜಿರೆ: ಇಲ್ಲಿನ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಕೆನರಾ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಕನ್ನಡ ಮತ್ತು ಇಂಗ್ಲಿಷ್ ಭಾಷಣ ಸ್ಪರ್ಧೆ ನಡೆಯಿತು. ಕನ್ನಡ ವಿಭಾಗದಲ್ಲಿ ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಧರಿತ್ರಿ ಭಿಡೆ ಹಾಗೂ ಇಂಗ್ಲಿಷ್ ವಿಭಾಗದಲ್ಲಿ ಮಂಗಳೂರಿನ ಸಂತ ಆ್ಯಗ್ನೆಸ್ ಪದವಿ ಪೂರ್ವ ಕಾಲೇಜಿನ ವಂದನ್ ಜೊವ ರಶ್ಕಿನ್ಹ ಪ್ರಥಮ ಸ್ಥಾನವನ್ನು ಪಡೆದುಕೊಂಡರು.
ಕನ್ನಡ ಭಾಷಣದಲ್ಲಿ ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಸವ ಸ್ವರೂಪ್ ಆರ್.ವೈ ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿಂದ್ಯಾಶ್ರೀ ರೈ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದರು. ಇಂಗ್ಲಿಷ್ ಭಾಷಣದಲ್ಲಿ ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಧರಣೀ ದ್ವಿತೀಯ ಸ್ಥಾನವನ್ನು ಪಡೆದುಕೊಂಡರೆ ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವೈಭವ್ ಯು ಮತ್ತು ಉಜಿರೆಯ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನ ಪೂರ್ವಿಕ್ ತೃತೀಯ ಸ್ಥಾನವನ್ನು ಪಡೆದುಕೊಂಡರು.
ಕಾರ್ಯಕ್ರಮವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಎಂ.ವೈ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷದ ಅಂಗವಾಗಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಐವತ್ತಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ