ವಿವೇಕಾನಂದ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಆ. 13ಕ್ಕೆ

Upayuktha
0

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜು, ಹಿರಿಯ ವಿದ್ಯಾರ್ಥಿ ಸಂಘ(ರಿ) ಹಾಗೂ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಅಗಸ್ಟ್ 13 ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ವಹಿಸಲಿದ್ದು ಮುಖ್ಯ ಅತಿಥಿಯಾಗಿ ಭಜರಂಗ ದಳದ ರಾಷ್ಟ್ರೀಯ ಸಹ ಸಂಯೋಜಕ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸೂರ್ಯನಾರಾಯಣ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಪಿ, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ.ಮನಮೋಹನ ಎಂ ಉಪಸ್ಥಿತರಿರುತ್ತಾರೆ.


ಪೂರ್ವಾಹ್ನ ಸರಸ್ವತಿ ಪೂಜೆ‌ ನೆರವೇರಲಿದ್ದು ತದನಂತರದಲ್ಲಿ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದಿಂದ ಭಾರತ ಮಾತೆಯ ಭಾವಚಿತ್ರ ನೀಡಿ ಸ್ವಾಗತ ಕಾರ್ಯಕ್ರಮ ನೆರವೇರಲಿದೆ.


ಸನ್ಮಾನ ಸಮಾರಂಭ:

ಈ ಸಂದರ್ಭದಲ್ಲಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ.ಆರ್ ವೇದವ್ಯಾಸ್ ಹಾಗೂ ಹಿರಿಯ ವಿದ್ಯಾರ್ಥಿ, ಸಾಹಿತಿ ರಘು ಇಡ್ಕಿದು ಇವರಿಗೆ ಗೌರವಾರ್ಪಣೆ ನೆರವೇರಲಿದೆ.ನಂತರ ವಿಠಲ ನಾಯಕ್ ಕಲ್ಲಡ್ಕ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ.ಮನಮೋಹನ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top