ವಿವೇಕಾನಂದ ಪದವಿ ಪೂರ್ವ ಕಾಲೇಜು: ಈಜು ಸ್ಫರ್ಧೆಯಲ್ಲಿ ಪ್ರಶಸ್ತಿ

Upayuktha
0

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪರ್ಲಡ್ಕ ಡಾ| ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಜರಗಿದ ಪದವಿ ಪೂರ್ವ ಕಾಲೇಜಿಗಳ ದ.ಕ ಜಿಲ್ಲಾ ಮಟ್ಟದ ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಎರಡು ಕಂಚಿನ ಪದಕವನ್ನು ಪಡೆದಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಶಾಲ್ 50 ಮೀಟರ್ ಬಟರ್ ಪ್ಲೈನಲ್ಲಿ ಕಂಚಿನ ಪದಕ ಪಡೆದಿದ್ದಾರೆ.


4x100 ಮೀಟರ್ ಪ್ರೀ ಸ್ಟೈಲ್ ರೀಲೆನಲ್ಲಿ ಭಾಗವಹಿಸಿದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸೃಜನ್, ವಿಶಾಲ್, ಕೀರ್ತನ್ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿಕಾಸ್‌ರವರನ್ನು ಒಳಗೊಂಡ ತಂಡವು ಕಂಚಿನ ಪದಕ ಪಡೆದಿದೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top