||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಿಕ್ಷಕರಿಲ್ಲದ ಸಮಾಜವನ್ನು ಊಹಿಸುವುದಕ್ಕೆ ಅಸಾಧ್ಯ: ಸುಬ್ರಹ್ಮಣ್ಯ ನಟ್ಟೋಜ

ಶಿಕ್ಷಕರಿಲ್ಲದ ಸಮಾಜವನ್ನು ಊಹಿಸುವುದಕ್ಕೆ ಅಸಾಧ್ಯ: ಸುಬ್ರಹ್ಮಣ್ಯ ನಟ್ಟೋಜ

 ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರಪುತ್ತೂರು: ವೈದ್ಯರಿಲ್ಲದೆ ರೋಗಿಗಳಿಲ್ಲ, ಇಂಜಿನಿಯರ್ಸ್ ಇಲ್ಲದೆ ಕಟ್ಟಡಗಳಿಲ್ಲ ಆದರೆ ಇವರನ್ನೆಲ್ಲ ರೂಪಿಸುವವರು ಶಿಕ್ಷಕರು. ಆದ್ದರಿಂದ ಶಿಕ್ಷಕರೇ ನಿಜವಾಗಿ ದೇಶವನ್ನು ಕಟ್ಟುವವರು. ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕೊಡದಿದ್ದರೆ ಅನಾಹುತಗಳಾಗುತ್ತದೆ. ಶಕ್ತಿ ಮೀರಿ ಮಗುವನ್ನು ಬೆಳೆಸುವುದರ ಜೊತೆಗೆ ಸಮಾಜಕ್ಕೆ ನ್ಯಾಯ ಒದಗಿಸಬೇಕಾದ ಕರ್ತವ್ಯ ಶಿಕ್ಷಕರದ್ದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಆಶ್ರಯದಲ್ಲಿ ಶುಕ್ರವಾರ ಸಂಸ್ಥೆಯ ಹಾಗೂ ಬೆಳ್ಳಾರೆಯ ಜ್ಞಾನಗಂಗಾ ಸಿಬಿಎಸ್‍ಇ ಸಂಸ್ಥೆಯ ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.


ಸಂಪನ್ಮೂಲ ವ್ಯಕ್ತಿಯಾಗಿ ಬಾಗಲಕೋಟೆಯ ಬಾಪೂಜಿ ಇಂಟನ್ರ್ಯಾಷನಲ್ ಸ್ಕೂಲ್ ಇದರ ಪ್ರಾಚಾರ್ಯ ಡಾ. ಮಹೇಶ್ ಕಡಕ್ಕಲಕತ್ ಭಾಗವಹಿಸಿ 'ಹ್ಯಾಪಿ ಕ್ಲಾಸ್ ರೂಮ್' ಎಂಬ ವಿಷಯದ ಬಗೆಗೆ ಕಾರ್ಯಗಾರ ನಡೆಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಉಪಸ್ಥಿತರಿದ್ದರು.

ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಪ್ರಾಂಶುಪಾಲೆ ಮಾಲತಿ. ಡಿ ಭಟ್ ಸ್ವಾಗತಿಸಿ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ವಂದಿಸಿದರು. ಶಿಕ್ಷಕಿಯರಾದ ರಮ್ಯ ಹಾಗೂ ಕೃತಿಕ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 Comments

Post a Comment

Post a Comment (0)

Previous Post Next Post