ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜು ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಹಾಗೂ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ.


ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಾಗರಿ ಎನ್ ರೈ, ದೀಕ್ಷಾ ಕೆ, ನಿಧಿ ಎಂ. ಎಸ್, ವಾಣಿಜ್ಯ ವಿಭಾಗದ ಸಿಂಚನಾ ಎ ಮತ್ತು ಅನುಜ್ಞಾ ಕೆ ಭಾಗವಹಿಸಿದ್ದರು. 


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ, ಮನ್ವಿತ್ ಎನ್ ಗೌಡ ಮತ್ತು ವಾಣಿಜ್ಯ  ವಿಭಾಗದ ಶ್ರೀನಿಧಿ ಕೆ ಭಾಗವಹಿಸಿದ್ದರು. 


ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್  ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top