|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

  



ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ವೈಯಕ್ತಿಕ ವಿಭಾಗದ ಯೋಗಾಸನ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ (ಪುತ್ತೂರಿನ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ. ರಿಧಮಿಕ್ ವಿಭಾಗದ ಸ್ಫರ್ಧೆಯಲ್ಲಿ  ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಾಗರಿ(ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ) ವೈಯಕ್ತಿಕ ವಿಭಾಗದ ಸ್ಫರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳು ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗಾಸನ ಸ್ಫರ್ಧೆಗೆ ಆಯ್ಕೆ ಆಗಿದ್ದಾರೆ.


ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post