ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಲಾಗಿದೆ.
ಈವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಸಚಿವರ ಸ್ಥಾನಮಾನ ನೀಡಿರಲಿಲ್ಲ. ಇದೇ ಮೊಟ್ಟಮೊದಲ ಬಾರಿಗೆ ಸರ್ಕಾರ ಕಸಾಪ ರಾಜ್ಯಾಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದೆ.
ಸಚಿವರ ದರ್ಜೆ ಸ್ಥಾನಮಾನ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಮಗ್ರ ಕನ್ನಡಿಗರ ಪರವಾಗಿ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಸರ್ಕಾರ ರಾಜ್ಯ ಸಚಿವರ ದರ್ಜೆ ಸ್ಥಾನಮಾನದ ಗೌರವ ನೀಡಿರುವುದು ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಿಗೆ ಸಲ್ಲಿಸಿರುವ ಸನ್ಮಾನವಾಗಿದೆ. ಈ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲೆ ಸರ್ಕಾರ ಇಟ್ಟಿರುವ ಭರವಸೆ, ವಿಶ್ವಾಸವನ್ನು ಕಾಪಾಡಿಕೊಂಡು ಹೋಗುವ ಹಾಗೂ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತುಕೊಂಡು ಕನ್ನಡ-ಕನ್ನಡಿಗ-ಕರ್ನಾಟಕ ಇವುಗಳ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಕಟಿಬದ್ಧನಾಗಿರುತ್ತೇನೆ ಎಂಬ ಭಾವನೆಯನ್ನು ಡಾ. ಮಹೇಶ ಜೋಶಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ