ಶಟಲ್ ಬ್ಯಾಡ್ಮಿಂಟನ್: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಇದರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ. ಅದೇ ರೀತಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್ ಪಿ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ, ವಿಘ್ನೇಶ್ ಚಂದ್ರಕಾಂತ್ ಯಾದವ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಲವಿತ್ ಎಂ ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ ಪಿ.ಎನ್, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರಾವ್ಯ ಮತ್ತು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ, ನೇಹಾಲ್ ಎಸ್ ಎಂ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top