ಉಜಿರೆ: ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆ.8 ರಿಂದ 15ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ರಾಜ್ಯದಲ್ಲಿ 15,756 ಶ್ರದ್ಧಾ ಕೇಂದ್ರಗಳನ್ನು 3,97,000 ಸ್ವಯಂ ಸೇವಕರು ಸ್ವಚ್ಛತಾ ಸಪ್ತಾಹದ ಮೂಲಕ ಸ್ವಚ್ಛಗೊಳಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
“ನಮ್ಮೂರು ನಮ್ಮ ಶ್ರದ್ಧಾಕೇಂದ್ರ” ಎಂಬ ಧ್ಯೇಯ ವಾಕ್ಯದೊಂದಿಗೆ ಕಳೆದ ಆರು ವರ್ಷಗಳಿಂದ ವರ್ಷದಲ್ಲಿ ಎರಡು ಬಾರಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಮಕರ ಸಂಕ್ರಾಂತಿ ಸಂದರ್ಭದಲ್ಲಿ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ ಮತ್ತು ಚರ್ಚ್ ಗಳ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಗುತ್ತದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ