ಗೃಹರಕ್ಷಕದಳ ಸುರತ್ಕಲ್: ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

Upayuktha
0

ಸುರತ್ಕಲ್: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ‘ಆಜಾದೀ ಕಾ ಅಮೃತ ಮಹೋತ್ಸವ’ ಅಭಿಯಾನದ ಅಂಗವಾಗಿ ದಿನಾಂಕ 10 - 08 - 2022ನೇ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಸುರತ್ಕಲ್ ಘಟಕದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.


ಈ ಅಭಿಯಾನದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ವಹಿಸಿ ಮಾತನಾಡಿ, ರಾಷ್ಟ್ರ ಧ್ವಜವನ್ನು ಮನೆ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರಂದು ಹಾರಿಸಬೇಕು, ಅರಳಿಸಬೇಕು, ಗೌರವಿಸಬೇಕು, ರಾಷ್ಟ್ರ ಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿರುತ್ತದೆ, ಜನರಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಅರಿವು, ಜಾಗೃತಿ ಮೂಡಿಸಿ ರಾಷ್ಟ್ರದ ಬಗ್ಗೆ ಅಭಿಮಾನ ಮತ್ತು ಗೌರವ ಮೂಡಿಸಬೇಕು ಎಂದು ನುಡಿದರು.


ರಾಷ್ಟ್ರ ಧ್ವಜಕ್ಕೆ ಎಲ್ಲಾ ರೀತಿಯ ಗೌರವ ನೀಡಿ ಧ್ವಜ ಸಂಹಿತೆಯ ಮಾರ್ಗದರ್ಶನದಂತೆ ನಡೆಯತಕ್ಕದ್ದು. ಪ್ರತಿ ಗೃಹರಕ್ಷಕರು ತಮ್ಮ ಮನೆಗಳಲ್ಲಿ ಮೂರು ದಿನ ರಾಷ್ಟ್ರ ಧ್ವಜ ಅರಳಿಸಿ, ದೇಶ ಪ್ರೇಮ ಮೆರೆಯಬೇಕು ಎಂದು ಗೃಹರಕ್ಷಕರಿಗೆ ಆದೇಶ ನೀಡಿದರು.


ಈ ಕಾರ್ಯಕ್ರಮದಲ್ಲಿ ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ರಮೇಶ್, ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top