ಮಂಗಳೂರು: ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ಕೆ. ಆರ್. ಎಂ. ಎಸ್. ಎಸ್) ದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನ ಸರಣಿ ಉಪನ್ಯಾಸ ಮಾಲಿಕೆಯನ್ನು ಆಗಸ್ಟ್ 10 ರಿಂದ 12 ರವೆರೆಗೆ ಮಂಗಳೂರು ವಿವಿ ಅಧೀನದ ವಿವಿಧ ಕಾಲೇಜುಗಳಲ್ಲಿ ಆಯೋಜಿಸಲಾಗಿದೆ.
ಆಗಸ್ಟ್ 10 ರಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಮೂಡಬಿದಿರೆಯ ಜೈನ ಹೈಸ್ಕೂಲ್‌ನ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಅವರಿಂದ ಉಪನ್ಯಾಸ ನಡೆಯಲಿದೆ. ಅದೇ ದಿನ ಬನ್ನಡ್ಕದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮೂಡಬಿದಿರೆಯ ಜೈನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಪ್ರಭಾತ್ ಬಲ್ನಾಡ್ ಉಪನ್ಯಾಸ ನೀಡಲಿದ್ದಾರೆ.
ಆಗಸ್ಟ್ 11 ರಂದು ಕಲ್ಲಡ್ಕದ ಶ್ರೀ ರಾಮ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಅಶೋಕ್, ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸ ನೀಡಲಿದ್ದಾರೆ. ಆಗಸ್ಟ್ 12 ರಂದು ಮಂಗಳೂರಿನ ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ವಾಮನಪದವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಹಾಗೂ ಸಾಮಾಜಿಕ ಕಾರ್ಯಕರ್ತ ಸುರೇಶ್ ಪರ್ಕಳ, ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸ ನಡೆಸಿಕೊಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.