ಮಂಗಳೂರು ವಿವಿ ಕಾಲೇಜು: ಆ. 10 ರಂದು ಕರಾವಳಿ ಸ್ವಾತಂತ್ರ್ಯ ಹೋರಾಟ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

Upayuktha
0

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಐಕ್ಯೂಎಸಿ, ಇತಿಹಾಸ ವಿಭಾಗ ಮತ್ತು ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗಗಳು, ಸ್ನಾತಕ ಮತ್ತು ಸ್ನಾತಕೋತ್ತರ ಹಿಂದಿ ವಿಭಾಗ ಹಾಗೂ ಸಮಾಜಶಾಸ್ತ್ರ ವಿಭಾಗಗಳ ಸಹಯೋಗದೊಂದಿಗೆ, 'ಆಝಾದಿ ಕ ಅಮೃತ್‌ ಮಹೋತ್ಸವ್‌' ಭಾಗವಾಗಿ 'ಕರಾವಳಿ ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಪುನರ್‌ ಮನನ' ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಗಸ್ಟ್‌ 10 (ಬುಧವಾರ) ರಂದು 9 ಗಂಟೆಗೆ ಆಯೋಜಿಸಿವೆ.


ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ಕೆ ಎಂ ಲೋಕೇಶ್‌ ಮುಖ್ಯ ಅತಿಥಿಯಾಗಿರಲಿದ್ದಾರೆ. ಗೋವಾ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥ, ಸಮಾಜ ವಿಜ್ಞಾನ ವಿಭಾಗದ ನಿವೃತ್ತ ಡೀನ್‌ ಡಾ. ಎನ್‌ ಶ್ಯಾಮ್‌ ಭಟ್‌ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ . ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲೆ ಡಾ. ಅನಸೂಯ ರೈಉಪಸ್ಥಿತರಿರಲಿದ್ದಾರೆ.


ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಿನಯ್‌ ರಜತ್‌ ಡಿ ಹಾಗೂ ಮಂಗಳೂರಿನ ಸೈಂಟ್‌ ಆಗ್ನೆಸ್‌ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ನಾಗೇಶ್‌ ಕ್ರಮವಾಗಿ ಮೊದಲೆರಡು ಅವಧಿಗಳನ್ನು ನಡೆಸಿಕೊಡಲಿದ್ದಾರೆ. ಬಳಿಕ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲು ಅವಕಾಶವಿದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಬಿಹಾರದ ಪಾಟ್ನಾದ ಬರಹಗಾರ ಪ್ರೊ. ಇಂದು ಜುಂಜುನ್ವಾಲಾ ಗೌರವ ಅತಿಥಿಯಾಗಿರಲಿದ್ದಾರೆ. ಪ್ರಾಂಶುಪಾಲೆ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top