ನಿಟ್ಟೆ: ಎನ್.ಐ.ಆರ್.ಎಫ್ ಪ್ರಾಮುಖ್ಯತೆಯ ಬಗ್ಗೆ ಕಾರ್ಯಾಗಾರ

Upayuktha
0

ನಿಟ್ಟೆ: 'ದೇಶದ ಅಭಿವೃದ್ದಿಯಲ್ಲಿ ಶಿಕ್ಷಣ ಕ್ಷೇತ್ರ ಅತಿಪ್ರಾಮುಖ್ಯತೆಯನ್ನು ಪಡೆದಿದೆ. ಶಿಕ್ಷಣದ ಗುಣಮಟ್ಟ ಉತ್ತಮವಾಗಿದ್ದರೆ ಸಮಾಜದ ಏಳಿಗೆ ಕ್ಷಿಪ್ರವಾಗಲಿದೆ' ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ| ಕೆ. ಬಲವೀರ ರೆಡ್ಡಿ ಅಭಿಪ್ರಾಯಪಟ್ಟರು.


ಅವರು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆ.25 ರಂದು ನಡೆದ ಒಂದು ದಿನದ ಎನ್.ಐ.ಆರ್.ಎಫ್ ಶ್ರೇಯಾಂಕದ ಕುರಿತಾದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. 'ಶಿಕ್ಷಣಸಂಸ್ಥೆಗಳ ಗುಣಮಟ್ಟ ಮೌಲ್ಯಮಾಪನಕ್ಕಾಗಿ ನ್ಯಾಕ್, ಎನ್.ಬಿ.ಎ ಮುಂತಾದ ಸಂಸ್ಥೆಗಳು ಇವೆ. ಇವುಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವಾಲಯದ ಎನ್.ಐ.ಆರ್.ಎಫ್ ಎಂಬ ಶ್ರೇಯಾಂಕ ಪ್ರಕ್ರಿಯೆ ಇತ್ತೀಚಿನ ಕೆಲವು ವರ್ಷಗಳಿಂದ ಪ್ರಾಮುಖ್ಯತೆಯನ್ನು ಪಡೆಯುತ್ತಿದ್ದು ನ್ಯೂ ಎಜುಕೇಶನ್ ಪಾಲಿಸಿಯನ್ನು ಕಾರ್ಯಗತಗೊಳಿಸುವುದರಿಂದ ಮುಂದಿನ 15-20 ವರ್ಷಗಳಲ್ಲಿ ಶಿಕ್ಷಣಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳನ್ನು ಕಾಣಬಹುದಾಗಿದೆ. ಎನ್.ಐ.ಆರ್.ಎಫ್ ಶ್ರೇಯಾಂಕದ ಐದು ಮಾನದಂಡಗಳ ಬಗೆಗೆ ಅಧ್ಯಾಪಕರು ಹೆಚ್ಚಿನ ಜ್ಞಾನ ಬೆಳೆಸಿಕೊಂಡು ಸಂಸ್ಥೆಯ ಅಭಿವೃದ್ಧಿಗೆ ಕೆಲಸಮಾಡಬೇಕು' ಎಂದರು.


ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಶ್ರೀ ಎನ್. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ| ಶ್ರೀನಿವಾಸ ರಾವ್ ಬಿ.ಆರ್, ಐ.ಐ.ಸಿ ನಿರ್ದೇಶಕ ಡಾ. ಪರಮೇಶ್ವರನ್ ವಿವಿಧ ವಿಭಾಗಗಳ ಮುಖ್ಯಸ್ಥರು, ಸಹಪ್ರಾಧ್ಯಾಪಕರು ಉಪಸ್ಥಿತರಿದ್ದರು.


ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ.ಐ ರಮೇಶ್ ಮಿತ್ತಂತಾಯ ವಂದಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top