ಅಂಬಿಕಾದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ

Upayuktha
0


ಪುತ್ತೂರು: ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಹೊರತರಲು ಇರುವ ಅವಕಾಶ ಸ್ಪರ್ಧೆಗಳು. ಆರೋಗ್ಯಕರ ಸ್ಪರ್ಧೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೂ ಅವಶ್ಯಕ. ಸೋಲು-ಗೆಲುವು- ಬಹುಮಾನ ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.


ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ, ಶುಭ ಹಾರೈಸಿದರು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಪ್ರಾಚಾಯೆ ಸುಚಿತ್ರಾ ಪ್ರಭು, ಉಪಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ ಎಸ್ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕನ್ನಡ ಉಪನ್ಯಾಸಕ ಸತೀಶ ಕೆ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top