ರೆಡ್‌ಕ್ರಾಸ್‌ ಶತಮಾನೋತ್ಸವ ಕಟ್ಟಡ ಯೋಜನೆಗೆ ಬ್ಯಾಂಕ್‌ ಆಫ್‌ ಇಂಡಿಯಾದಿಂದ 10 ಲಕ್ಷ ರೂ ದೇಣಿಗೆ

Upayuktha
0

ಮಂಗಳೂರು: ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀ ಅತನು ಕುಮಾರ್ ದಾಸ್ ಅವರು ಇಂದು ಮಂಗಳೂರಿಗೆ ಭೇಟಿ ನೀಡಿ ರೆಡ್‌ಕ್ರಾಸ್ ಚಟುವಟಿಕೆಗಳನ್ನು ಶ್ಲಾಘಿಸಿದರು. ಮುಂಬರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಯೋಜನೆಗೆ ಬ್ಯಾಂಕಿನ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ (ಸಿಎಸ್‌ಆರ್ ಚಟುವಟಿಕೆ) 10 ಲಕ್ಷ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರಿಸಿದರು.


ಜಿಲ್ಲಾ ಪಂಚಾಯತ್ ಸಿಇಒ ಮತ್ತು ರೆಡ್‌ಕ್ರಾಸ್ ಉಪಾಧ್ಯಕ್ಷ ಡಾ.ಕುಮಾರ್ ಐಎಎಸ್ ಅವರು ದ.ಕ.ಜಿಲ್ಲೆಯಲ್ಲಿ ರೆಡ್‌ಕ್ರಾಸ್‌ನ ಚಟುವಟಿಕೆಗಳನ್ನು ವಿವರಿಸಿದರು. ಎಂಡಿ ಅತನು ಕುಮಾರ್ ದಾಸ್ ಮತ್ತು ಅವರ ಇಡೀ ಬ್ಯಾಂಕ್ ಆಫ್ ಇಂಡಿಯಾ ತಂಡಕ್ಕೆ ಅವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top