ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಸಮಾರೋಪ ಸಮಾರಂಭ ಇಂದು

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಸೆ.16ರಿಂದ ನಡೆಯುತ್ತಿರುವ 24ನೆ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ ಶುಕ್ರವಾರ ಬೆಳಿಗ್ಗೆ 11.00 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುತ್ತದೆ.

ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಸಚಿವ ವಿ. ಸುನಿಲ್ ಕುಮಾರ್, ಶಾಸಕ ಹರೀಶ್ ಪೂಂಜ, ಚಲನಚಿತ್ರ ಸಂಗೀತ ನಿರ್ದೇಶಕ ಶ್ರೀಧರ್ ಸಂಭ್ರಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ಮಾಣಿಲದ ಮೋಹನದಾಸ ಸ್ವಾಮೀಜಿ, ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿರುವರು. 84 ತಾಲೂಕುಗಳಿಂದ 183 ಭಜನಾ ಮಂಡಳಿಗಳ 320 ಶಿಬಿರಾರ್ಥಿಗಳು ತರಬೇತಿ ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆ.

ನೃತ್ಯ ಭಜನೆ: ಸಮಾರಂಭದಲ್ಲಿ 300 ಭಜನಾ ತಂಡಗಳ 5000 ಭಜನಾ ಪಟುಗಳಿಂದ ನೃತ್ಯ ಭಜನೆ ನಡೆಯುತ್ತದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top