ಮುಡಿಪು: ವಿಶ್ವ ವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ನಡೆಯುವ ಪ್ರತಿಷ್ಟಿತ ಪ್ರಧಾನ ಕವಿಗೋಷ್ಠಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಡಾ. ಧನಂಜಯ ಕುಂಬ್ಳೆ ಇವರು ಮಂಗಳೂರಿನಿಂದ ಕವಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 3 ರ ಸೋಮವಾರ ಬೆಳಿಗ್ಗೆ 10.30 ಕ್ಕೆ ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿ ಆವರಣದಲ್ಲಿರುವ ಸೆನೆಟ್ ಸಭಾಂಗಣದಲ್ಲಿ ಸುಪ್ರಸಿದ್ಧ ಕವಿ ಹಾಗೂ ನಾಟಕಕಾರರಾದ ಡಾ. ಚಂದ್ರಶೇಖರ ಕಂಬಾರರು ಕವಿಗೋಷ್ಠಿಯನ್ನು ಉದ್ಘಾಟಿಸಲಿದ್ದಾರೆ. ಪ್ರಸಿದ್ಧ ಕವಿ ಹಾಗೂ ನಾಟಕಕಾರರಾದ ಡಾ.ಎಚ್.ಎಸ್. ಶಿವಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿಯು ನಡೆಯಲಿದೆ.
ಡಾ.ಧನಂಜಯ ಕುಂಬ್ಳೆ ಇವರು ಮೊದಲ ಪಾಪ, ಹಾಡು ಕಲಿತ ಹಕ್ಕಿಗೆ, ಹಣತೆ ಹಾಡು ಕವನ ಸಂಕಲನಗಳನ್ನು ಒಳಗೊಂಡಂತೆ 10 ಕೃತಿಗಳನ್ನೂ, 11 ಸಂಪಾದಿತ ಕೃತಿಗಳನ್ನು ಪ್ರಕಟಿಸಿದ್ದಾರೆ. ಪೇಜಾವರ ಸದಾಶಿವರಾವ್ ಕಾವ್ಯ ಪ್ರಶಸ್ತಿ, ಮುದ್ದಣ ಕಾವ್ಯ ಪ್ರಶಸ್ತಿ, ಸಾಹಿತ್ಯ ಪರಿಷತ್ತಿನ ಮಯೂರವರ್ಮ ಪ್ರಶಸ್ತಿ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ