ಉಜಿರೆ: ಖ್ಯಾತ ಪಶುವೈದ್ಯರಾದ ಡಾ. ದಿನೇಶ ಸರಳಾಯ ಇವರು ಕೇಂದ್ರ ಕೃಷಿ ಮಂತ್ರಾಲಯ ಹಾಗೂ ಭಾರತೀಯ ಕೃಷಿ ಅನುಸಂಧಾನ ಸಂಸ್ಥೆಯ ಅಧೀನದಲ್ಲಿ ಬರುವ 'ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ'ಯ ಸದಸ್ಯರಾಗಿ ಮೂರು ವರ್ಷಗಳ ಅವಧಿಗೆ ಕೇಂದ್ರ ಕೃಷಿ ಸಚಿವಾಲಯದಿಂದ ನಾಮನಿರ್ದೇಶನಗೊಂಡಿದ್ದಾರೆ.
ಇವರು ಅನೇಕ ವರ್ಷಗಳ ಕಾಲ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಹೈನು ವಿಜ್ಞಾನ ವಿಭಾಗದ ಉಪನ್ಯಾಸಕರಾಗಿ, ಕೆ.ಎಂ.ಎಫ್ ಸಂಸ್ಥೆಯ ವೈದ್ಯರಾಗಿದ್ದು ಇದೀಗ ಖಾಸಗಿ ಪಶು ವೈದ್ಯರಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರಪರಿಚಿತರು. ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯರಾಗಿಯೂ ಅನೇಕ ಸೇವಾ ಕಾರ್ಯಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ