ಫುಟ್ಬಾಲ್ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ.


ತಂಡದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಹಾರ್ದಿಕ್, ದೀಪಕ್, ಸಂಜಯ್, ಶಶಿಕಾಂತ್, ಎಂ. ಸಾತ್ವಿಕ್, ಸುನೀಲ್ ಕುಮಾರ್, ಭಿದ್ಯರಾಜ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನುಷ್ ಕೆ.ಎನ್, ಅರ್ಜುನ್ ಕೆ.ಎಚ್, ವಾಣಿಜ್ಯ ವಿಭಾಗದ ಲಿಂಕಿತ್, ತಿಲಕ್, ಜಿತೇಶ್, ಅವಿನಾಶ್ ಭಾಗವಹಿಸಿದ್ದರು. 


ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top