ಪುತ್ತೂರು: ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ಇಂದು (ಸೆ.24) ನಡೆಯಲಿದೆ.
ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ ಏರ್ಪಡಿಸಲಾಗಿದೆ.
ಜನಸೇವಾ ಟ್ರಸ್ಟ್‌ನ ಗೌರವಾನ್ವಿತ ಕಾರ್ಯದರ್ಶಿಗಳಾದ ನಿರ್ಮಲ್ ಕುಮಾರ್ ಜಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇದ ವಿಜ್ಞಾನ ಗುರುಕುಲಂನ ಮುಖ್ಯಸ್ಥರಾದ ಪ್ರೊ. ರಾಮಚಂದ್ರ ಜಿ. ಭಟ್ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ವಿವರಗಳಿಗಾಗಿ ಕಾರ್ಯಕರ್ತರಾದ ಡಿ.ಕೆ. ಅಜಿತ್ ಕುಮಾರ್ (9008395200), ಯೋಗೀಶ್ (7483303805) ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ