ಕಬಡ್ಡಿ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಕಬ್ಬಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ. ಈ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪವಿತ್ರ ಭಟ್ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿ ಹಾಗೂ ವಾಣಿಜ್ಯ ವಿಭಾಗದ ಸೌಮ್ಯ ರೈ ಬೆಸ್ಟ್ ಕ್ಯಾಚರ್ ಪ್ರಶಸ್ತಿ ಪಡೆದರು. 


ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್ಯ ಕೆ, ಪವಿತ್ರ ಭಟ್ ಕೆ,  ವಾಣಿಜ್ಯ ವಿಭಾಗದ ಖುಷಿ ರೈ, ಸೌಮ್ಯ ರೈ, ಎಂ ನಿತ್ಯಶ್ರೀ ರೈ, ಸಿಂಚನಾ ಪಿ.ಯು, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನ್ನಪೂರ್ಣ ರೈ, , ವಾಣಿಜ್ಯ ವಿಭಾಗದ ಹೇಮಲತಾ ಕೆ, ಮನ್ಯಾ ಶ್ರೀ ಎಂ, ಕಲಾ ವಿಭಾಗದ ಭೂಮಿಕಾ ಭಾಗವಹಿಸಿದ್ದರು. 


ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



إرسال تعليق

0 تعليقات
إرسال تعليق (0)
To Top