ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ನವದೆಹಲಿಯ ಔಪಚಾರಿಕವಲ್ಲದ ಸಂಸ್ಕೃತ ಶಿಕ್ಷಣ ಕೇಂದ್ರದ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 23 ರಂದು ಶ್ರೀನಿವಾಸ್ ಹೋಟೆಲ್‌ನಲ್ಲಿ ನಡೆಯಿತು.
ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಸಂಸ್ಕೃತ ಕೋರ್ಸ್ ಆರಂಭಿಸುವ ನನ್ನ ಕನಸು ಕೊನೆಗೂ ಈಡೇರಿದೆ ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಸಿಎ ಎ. ರಾಘವೇಂದ್ರ ರಾವ್ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.
ಮುಖ್ಯ ಅತಿಥಿ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿವ್ರತ್ತ ಏರ್‌ಪೋರ್ಟ್ ನಿರ್ದೇಶಕ ಎಂ.ಆರ್. ವಾಸುದೇವ ಮಾತನಾಡಿ, ಸಂಸ್ಕೃತ ಸರಳ, ಸುಲಭ ಮತ್ತು ಸುಂದರ ಭಾಷೆಯಾಗಿದೆ. ಇಂದಿನ ಪೀಳಿಗೆಯು ಉಪನಿಷತ್ತುಗಳನ್ನು ಮರೆತಿದೆ. ಆದರೆ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ ಎ. ರಾಘವೇಂದ್ರರಾವ್ ಅವರು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಸಮಾಜವನ್ನು ವಿಭಿನ್ನವಾಗಿ ಬದಲಾಯಿಸಲು ಮುಂದಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀನಿವಾಸ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ. ಎ.ವಿಜಯಲಕ್ಷ್ಮಿ ಆರ್.ರಾವ್ ಮತ್ತು ಪ್ರೊ. ಇಆರ್ ಶ್ರೀಮತಿ. ಎ. ಮಿತ್ರಾ ಎಸ್. ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಎಸ್. ಐತಾಳ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸಂಸ್ಕೃತ ಆಪ್ ಲೋಗೋವನ್ನು ಡಾ. ಸಿಎ ಎ. ರಾಘವೇಂದ್ರ ರಾವ್ ಮತ್ತು ಶ್ರೀಮತಿ ಎ.ವಿಜಯಲಕ್ಷ್ಮಿ ಆರ್.ರಾವ್ ಅವರು ಬಿಡುಗಡೆ ಮಾಡಿದರು. ಅಸೋಸಿಯೇಟ್ ಪ್ರೊಫೆಸರ್ ಡಾ.ವಿದ್ಯಾ ಎನ್. ಉಪಸ್ಥಿತರಿದ್ದರು.
ಸಂಸ್ಕೃತ ಸಂಶೋಧನಾ ಪ್ರಾಧ್ಯಾಪಕ ಡಾ. ಶಂಕರ ನಾರಾಯಣ ಭಟ್ ಸ್ವಾಗತಿಸಿ, ಶ್ರೀಮತಿ ಶೂಲಿ ಗೋಶಾಲ್ ಕೋರ್ಸ್ ವಿವರಿಸಿದರು. ಸಂಸ್ಕೃತ ಸಂಶೋಧನಾ ಪ್ರಾಧ್ಯಾಪಕ ಡಾ.ಭಾಸ್ಕರ್ ಭಟ್ ವಂದಿಸಿದರು. ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಯೋಜಕಿ ಮತ್ತು ಸಂಸ್ಕೃತ ಪ್ರಾಧ್ಯಾಪಕಿ ಡಾ. ಶಾಂತಲಾ ವಿಶ್ವಾಸ್ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ